`ಉತ್ತರ ಕನ್ನಡ ಜಿಲ್ಲೆಯ ಜನರ ಬಹುವರ್ಷದ ಬೇಡಿಕೆಯ ಪ್ರಕಾರ ಇಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಭಾನುವಾರ ಕಾರವಾರದ ವೈದ್ಯಕೀಯ ವಿಜ್ಞಾನ ಕಾಲೇಜು ಆವರಣದಲ್ಲಿ ಅವರು ನೂತನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದು, `ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳ ಅಗತ್ಯದ ಬಗ್ಗೆ ಜನ ಆಗ್ರಹಿಸಿದ್ದಾರೆ. ಬಹುಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಲಿದೆ. ಇಲ್ಲಿನ ಶಾಸಕರು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಸುಸಜ್ಜಿತ ಆಸ್ಪತ್ರೆಗಾಗಿ ಮನವಿ ಸಲ್ಲಿಸಿದ್ದು, ಮುಂದಿನ ಆಯವ್ಯಯದಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ’ ಎಂದವರು ಸ್ಪಷ್ಠಪಡಿಸಿದರು.
`ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸುಸಜ್ಜಿತ ಆಸ್ಪತ್ರೆ ಸ್ಥಾಪಿಸುವುದು ಸರ್ಕಾರದ ಉದ್ದೇಶವಾಗಿದೆ. ಅದರ ಭಾಗವಾಗಿ ಕಾರವಾರದಲ್ಲಿಯೂ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಲಿದೆ. ಮುಂದಿನ ವರ್ಷದಿಂದಲೇ ಕಾಮಗಾರಿ ಶುರುವಾಗಲಿದ್ದು, ಆ ಆಸ್ಪತ್ರೆಯನ್ನು ನಾನೇ ಉದ್ಘಾಟನೆ ಮಾಡುತ್ತೇನೆ’ ಎಂಬ ವಿಶ್ವಾಸದ ಮಾತುಗಳನ್ನು ಸಿದ್ದರಾಮಯ್ಯ ಅವರು ಆಡಿದ್ದಾರೆ.
ಎಂದಿನoತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಅವರು `ಆ ಪಕ್ಷದ ಆಡಳಿತದಲ್ಲಿ ಜಿಲ್ಲೆಗೆ ಅನ್ಯಾಯವಾಗಿದೆ. ಅಗತ್ಯವಾದ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಮಾಡಲಿಲ್ಲ’ ಎಂದು ದೂರಿದರು.