ಧಾರಾಕಾರ ಮಳೆ ಹಿನ್ನಲೆ ಕಾರವಾರ ತಾಲೂಕಿನ ಶಾಲೆಗಳಿಗೆ ಜುಲೈ 23ರ ಬುಧವಾರ ರಜೆ ಘೋಷಿಸಲಾಗಿದೆ.
ಕಾರವಾರದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ತಹಶೀಲ್ದಾರ್ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ತಹಶೀಲ್ದಾರ್ ಆದೇಶದ ಅನ್ವಯ ಈ ರಜೆ ಘೋಷಿಸಿರುವುದಾಗಿ ಕಾರವಾರದ ಕ್ಷೇತ್ರ ಶಿಕ್ಷಣಾಧಿಕಾರಿಗಳು mobiletime.inಗೆ ಪೋನ್ ಮೂಲಕ ಮಾಹಿತಿ ನೀಡಿದ್ದಾರೆ.
ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ ರಜೆ ಘೋಷಿಸಲಾಗಿದೆ. ರಜಾ ಅವಧಿಯ ಪಠ್ಯವನ್ನು ಮುಂದಿನ ದಿನದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ರಜೆ ಕಾರವಾರ ತಾಲೂಕಿಗೆ ಮಾತ್ರ ಅನ್ವಯ.
Discussion about this post