ಕರಾವಳಿ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಶಾಲೆಗಳಿಗೆ ಜುಲೈ 23ರ ಬುಧವಾರ ಜಿಲ್ಲಾಡಳಿತ ರಜೆ ಘೋಷಿಸಿದೆ.
ಮೊದಲು ಕಾರವಾರ ತಾಲೂಕಿಗೆ ಮಾತ್ರ ಸೀಮಿತಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ರಜೆ ನೀಡಿದ್ದರು. ಇದೀಗ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಐದು ತಾಲೂಕಿನ ಶಾಲೆ-ಪ್ರೌಢಶಾಲೆಗೆ ರಜೆ ಘೋಷಿಸಿದ್ದಾರೆ. ಇದರೊಂದಿಗೆ ಈ ಭಾಗದ ಅಂಗನವಾಡಿಗಳಿಗೂ ರಜೆ ನಿಯಮ ಅನ್ವಯ ಆಗಲಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಿಕ್ಷಣಾಧಿಕಾರಿಗಳಿಗೆ ರಜೆ ನಿಯಮ ಪಾಲಿಸಲು ಸೂಚಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ರಜೆ ಅನುಷ್ಠಾನಕ್ಕಾಗಿ ಡೀಸಿ ಆದೇಶ ಹೊರಡಿಸಿದ್ದಾರೆ.
Discussion about this post