ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಕರಾವಳಿ ಭಾಗದ ಶಾಲೆ-ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ಜುಲೈ 26ರಂದು ಉತ್ತರ ಕನ್ನಡ ಜಿಲ್ಲಾಡಳಿತ ರಜೆ ಘೋಷಿಸಿದೆ.
ಕಾರವಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕಾರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಪತ್ರದ ಅನ್ವಯ ಮುನ್ನಚ್ಚರಿಕಾ ಕ್ರಮವಾಗಿ ಈ ರಜೆ ಘೋಷಣೆಯಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮತ್ತು ಭಟ್ಕಳ ತಾಲೂಕಿಗೆ ಈ ರಜೆ ನಿಯಮ ಅನ್ವಯವಾಗಲಿದೆ.
ಭಾರತೀಯ ಹವಾಮಾನ ಇಲಾಖೆ ಹಾಗೂ ನೈಸರ್ಗಿಕ ವಿಕೋಪ ಕೇಂದ್ರವೂ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದ ಮಳೆ ಘೋಷಿಸಿದೆ. ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ ಮುಂದುವರೆದಿದೆ.
ಹೀಗಾಗಿ ರಜೆ ಘೋಷಿಸಿದ್ದು, ಸದ್ಯ ರಜಾ ಅವಧಿಯ ಪಾಠವನ್ನು ಬೇಸಿಗೆಯಲ್ಲಿ ಹೊಂದಾಣಿಕೆ ಮಾಡುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ.
Discussion about this post