ಶಿರಸಿ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಮಾರ್ಚ 11ರಂದು ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಆ ದಿನ ಬೆಳಗ್ಗೆ 9ಗಂಟೆಯಿoದ ಸಂಜೆ 4.30ರವರೆಗೆ ಶಿಬಿರ ನಡೆಯಲಿದೆ.
Advertisement. Scroll to continue reading.
ಶಿರಸಿಯ ಸ್ಕೊಡ್‌ವೆಸ್ ಸಂಸ್ಥೆ, ರೋಟರಿ ಕ್ಲಬ್, ಗುಜರಾತಿನ ದೇಸಾಯಿ ಫೌಂಡೇಶನ್ ಟ್ರಸ್ಟ್, ಶಿವಮೊಗ್ಗದ ನಾರಾಯಣ ಹೆಲ್ತ್ ಹಾಗೂ ಐಎಂಎ ಶಿರಸಿ ಸಹಯೋಗದಲ್ಲಿ ಈ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ಪ್ರಸಿದ್ಧ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ಮುಖ್ಯವಾಗಿ ಸ್ತ್ರೀ ರೋಗ, ಹೃದಯ ರೋಗ, ಚರ್ಮರೋಗ, ಉದರ ರೋಗ, ಕ್ಯಾನ್ಸರ್, ಮಧುಮೇಹ, ರಕ್ತದೊತ್ತಡ, ಮನೋರೋಗ, ಎಲುಬು ತಪಾಸಣೆ, ದಂತ ತಪಾಸಣೆ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸೆ ನೀಡಲಾಗುತ್ತದೆ.
ಜೊತೆಗೆ ಮಕ್ಕಳ ತಪಾಸಣೆ, ನೇತ್ರ ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆಯೂ ನಡೆಯಲಿದೆ. ಔಷಧಿಗಳನ್ನು ಸಹ ಉಚಿತವಾಗಿಯೇ ನೀಡಲಾಗುತ್ತದೆ. ಅಲ್ಲದೇ ಆರೋಗ್ಯ ಸಲಹೆ, ಮಾರ್ಗದರ್ಶನ ನೀಡಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರಿಗೆ ಮುಂದಿನ ಹಂತಗಳ ಬಗ್ಗೆ ವಿವರಿಸಲಾಗುತ್ತದೆ. ಈ ಬಗ್ಗೆ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟೇಶ ನಾಯ್ಕ ಅವರು ಮಾಹಿತಿ ನೀಡಿದ್ದು, ಆರೋಗ್ಯ ಸಲಹೆ ಜೊತೆ ಸಮಸ್ಯೆ ಬಗ್ಗೆ ಅರಿತುಕೊಳ್ಳಲು ಎಲ್ಲರೂ ತಪಾಸಣೆಗೆ ಒಳಗಾಗಬೇಕಾಗಿ ಮನವಿ ಮಾಡಿದ್ದಾರೆ.