`ಪಠ್ಯೇತರ ಸೌಲಭ್ಯಗಳೂ ಸಹ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ಶಿರಸಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ ಹೇಳಿದ್ದಾರೆ. ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿ ಹಾಗೂ ರೋಟರಿ ಕ್ಲಬ್ ಶಿರಸಿ ಸಹಯೋಗದಲ್ಲಿ ಗಣೇಶನಗರ ಸರಕಾರಿ ಪ್ರಾಥಮಿಕ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಪೀಠೋಪಕರಣ ಹಸ್ತಾಂತರಿಸಿ ಮಾತನಾಡಿದ ಅವರು `ಮಕ್ಕಳ ಅಗತ್ಯಕ್ಕೆ ಅನುಗುಣವಾಗಿ ಪೀಠೋಪಕರಣ ಒದಗಿಸಿರುವುದರಿಂದ ಅವರ ಕಲಿಕೆಗೆ ಅನುಕೂಲವಾಗಿದೆ’ ಎಂದಿದ್ದಾರೆ.
`ಗಣೇಶ ನಗರ ಸರ್ಕಾರಿ ಪ್ರಾಥಮಿಕ ಶಾಲೆಯ ಹೆಚ್ಚಿನ ಮಕ್ಕಳು ಬಡ ಕುಟುಂಬಗಳ ಮಕ್ಕಳೇ ಆಗಿರುವುದರಿಂದ ಅವರಿಗೆ ಅಗತ್ಯವಿರುವ ಪೀಠೋಪಕರಣಗಳನ್ನು ಒದಗಿಸಿರುವುದು ಉತ್ತಮ ಬೆಳವಣಿಗೆ. ಈ ಚಟುವಟಿಕೆಯಿಂದ ಮಕ್ಕಳಲ್ಲಿ ಶಿಸ್ತು ಹಾಗೂ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯವಾಗುತ್ತದೆ’ ಎಂದವರು ಹೇಳಿದ್ದಾರೆ. ಶಿರಸಿ ರೋಟರಿ ಕ್ಲಬ್‌ನ ಅಧ್ಯಕ್ಷ ಶ್ರೀನಿವಾಸ ನಾಯ್ಕ ಅವರು ಮಾತನಾಡಿ `ರೋಟರಿ ಕ್ಲಬ್ ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಕಾರ್ಯಕ್ರಮಗಳನ್ನು ರೂಪಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಹಾಯಕಾರಿ. ಮುಂದಿನ ದಿನಗಳಲ್ಲಿ ರೋಟರಿ ಕ್ಲಬ್‌ನಿಂದ ಹೆಚ್ಚಿನ ಕಾರ್ಯಕ್ರಮಗಳನ್ನು ಶಿರಸಿ ನಗರದ ಶಾಲೆಗಳಲ್ಲಿ ಆಯೋಜಿಸಲಾಗುತ್ತದೆ’ ಎಂದು ಘೋಷಿಸಿದ್ದಾರೆ.
`ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಅಧ್ಯಕ್ಷೆ ಸರಸ್ವತಿ ಎನ್ ರವಿ ಅವರು ಮಾತನಾಡಿ `ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯು ದುಡಿಯುವ ಮಹಿಳೆಯರ ಸಂಸ್ಥೆಯಾಗಿದ್ದು, ಬಡ ಮಕ್ಕಳ ಶಿಕ್ಷಣ, ಆರೋಗ್ಯ, ವ್ಯಕ್ತಿತ್ವ ವಿಕಸನ, ವೃತ್ತಿ ಕೌಶಲ್ಯಕ್ಕೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಸಂಸ್ಥೆಯ ಮುಖಾಂತರ 150ಕ್ಕೂ ಹೆಚ್ಚಿನ ಶಾಲೆಗಳಲ್ಲಿ Sಖಿಇಒ ಐಚಿb, ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ, ಬೇಸಿಗೆ ಶಿಬಿರಗಳು, ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ’ ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಸ್ಕೊಡ್‌ವೆಸ್ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಕೆ.ಎನ್. ಹೊಸಮನಿ, ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ನಿರ್ದೇಶಕಿ ಮಾಲಿನಿ ಎಸ್ ಮಾತನಾಡಿದರು. ರೋಟರಿ ಖಜಾಂಚಿ ವಿನಾಯಕ್ ಶೇಟ್, ಎಕ್ಸಿಕ್ಯೂಟಿವ್ ಸೆಕ್ರೇಟರಿ ಸತೀಶ ಭಟ್, ಆರ್.ಎ. ಖಾಜಿ, ಗಣೇಶ ಕೂರ್ಸೆ, ಶ್ರೀಪತಿ ಹೆಗಡೆ, ದಿನೇಶ ಹೆಗಡೆ, ರಾಮಚಂದ್ರ ಪ್ರಭು, ಶಾಲಾ ಮುಖ್ಯೋಪಾಧ್ಯಾಯ ತೇಲು ಬೋರ್‌ಕರ್, ಸ್ಕೊಡ್‌ವೆಸ್ ಮಹಿಳಾ ಸೌಹಾರ್ದ ಸಹಕಾರಿಯ ಶಾಖಾ ವ್ಯವಸ್ಥಾಪಕಿ ವಂದನಾ ಜೇಕಬ್ ಇದ್ದರು. ಶಾಲಾ ಶಿಕ್ಷಕ ಮೋಹನ ನಾಯ್ಕ ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಹೆಗಡೆ ವಂದಿಸಿದರು. ಶಿಕ್ಷಕಿ ಜಯಶ್ರೀ ಭಟ್ ಕಾರ್ಯಕ್ರಮ ನಿರ್ವಹಿಸಿದರು.