ಆರು ದಶಕಗಳಿಂದ ಎರಡು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದ ಕಡವಾಡ ಸೇತುವೆ ಕುಸಿದು ಬಿದ್ದಿದೆ. ಶಿಥಿಲಗೊಂಡಿದ್ದ ಈ ಸೇತುವೆ ಸೋಮವಾರ ರಾತ್ರಿ ಸುರಿದ ಮಳೆಗೆ ನೆನೆದು ಮುರಿದಿದೆ. ಸೇತುವೆಯ ಕೆಲ ಭಾಗಗಳು ನದಿ ನೀರಿನಲ್ಲಿ ಕೊಚ್ಚಿ ಹೋಗಿ ಕಡಲು ಸೇರಿದೆ.
ADVERTISEMENT
ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ಅವರು ಕಡವಾಡ ಸೇತುವೆ ಉದ್ಘಾಟಿಸಿದ್ದರು. ಅದಾದ ನಂತರ ಆ ಸೇತುವೆ ಕಡವಾಡ ಜನರ ನಿತ್ಯದ ಸಂಪರ್ಕ ಮಾರ್ಗವಾಗಿತ್ತು. ಕೆಲ ವರ್ಷಗಳ ಹಿಂದೆ ಸೇತುವೆ ಶಿಥಿಲವಾಗಿದ್ದರಿಂದ ಅದರ ಬಳಕೆ ನಿಷೇಧಿಸಲಾಗಿತ್ತು. ಸಾರ್ವಜನಿಕ ಸಂಚಾರದ ಜೊತೆ ವಾಹನ ಓಡಾಟವನ್ನು ಸ್ಥಗಿತ ಮಾಡಲಾಗಿತ್ತು. ಅದಾಗಿಯೂ, ಅನೇಕರು ಸೇತುವೆ ಮೇಲೆ ನಿಂತು ಗಾಳ ಹಾಕಿ ಮೀನು ಹಿಡಿಯುತ್ತಿದ್ದರು. ಬೆಳಗ್ಗೆ ಹಾಗೂ ಸಂಜೆಯ ವೇಳೆ ಸೇತುವೆ ಮೂಲಕ ವಾಕಿಂಗ್ ಮಾಡುತ್ತಿದ್ದರು.
ಉಚಿತ ಬಂಜೆತನ ತಪಾಸಣಾ ಶಿಬಿರ - ಜೂನ್ 23, 2026
ಸ್ಥಳ: ಹೈಟೆಕ್ ರಕ್ತ ತಪಾಸಣಾ ಕೇಂದ್ರ & ಪಾಲಿ ಕ್ಲಿನಿಕ್ ಅಂಕೋಲಾ | ನೋವಾ ಐವಿಎಫ್
ADVERTISEMENT
ಕಾಳಿ ನದಿಯ ಮೇಲ್ಭಾಗದಲ್ಲಿ ನಿರ್ಮಾಣವಾಗಿದ್ದ ಈ ಸೇತುವೆ ಮೀನುಗಾರಿಕೆಗೆ ಸೂಕ್ತ ಸ್ಥಳವೆಂದು ಪ್ರಸಿದ್ಧಿಯಾಗಿತ್ತು. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿ ನೂರಾರು ಮೀನುಗಾರರು ಸೇತುವೆ ಮೇಲೆ ನಿಂತು ಮೀನುಗಾರಿಕೆ ನಡೆಸುತ್ತಿದ್ದರು. ಮಳೆಗಾಲದಲ್ಲಿಯೂ ಇಲ್ಲಿ ಮೀನುಗಾರರ ಚಟುವಟಿಕೆ ಸಾಮಾನ್ಯವಾಗಿತ್ತು. ಸೋಮವಾರ ರಾತ್ರಿ ಸುರಿದ ಭಾರೀ ಪ್ರಮಾಣದ ಮಳೆಗೆ ಸೇತುವೆಯ ಮಧ್ಯಭಾಗ ಸಂಪೂರ್ಣ ಕುಸಿಯಿತು. ಸದ್ಯ ಅಧಿಕಾರಿಗಳು ಪರಿಶೀಲನೆ ಮಾಡಿದ್ದು, ಸೇತುವೆ ಮೇಲೆ ಸಂಚರಿಸದAತೆ ಸೂಚಿಸಿದ್ದಾರೆ.